ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಂಗಳೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಮುಂದುವರಿದಿದೆ.



















