ಕಳೆದ ಬಾರಿ ಮುಂಗಾರು ಮಳೆ ಕೈ ಕೊಟ್ಟಿತ್ತು. ಆದರೆ, ಈ ಬಾರಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ವಾಡಿಕೆಗಿಂತ ಭಾರೀ ಮಳೆಯಾಗಿದ್ದು, ರೈತರು ಹೆಚ್ಚು ಮಳೆಯಿಂದಾಗಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.
ಬಾರಿ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಅಬ್ಬರಿಸಿದ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ಮೂಲಕ ಈ ಬಾರಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾದ ಪರಿಣಾಮ ಅಕ್ಟೋಬರ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 41ಕ್ಕಿಂತ ಅಧಿಕ ಮಳೆಯಾಗಿದೆ. ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ 131 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈ ಅವಧಿಯಲ್ಲಿ 184.8 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 41ರಷ್ಟು ಹೆಚ್ಚಳವಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ 157.7ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ 220.3 ಮಿ.ಮೀ.ಮಳೆಯಾಗಿದ್ದು, ಈ ಮೂಲಕ ವಾಡಿಕೆಗಿಂತ ಶೇಕಡ 60ರಷ್ಟು ಅಧಿಕ ಪ್ರಮಾಣದ ಮಳೆ ಸುರಿದಿದೆ. ಉತ್ತರ ಕರ್ನಾಟಕ ವ್ಯಾಪ್ತಿಯಲ್ಲಿ 107 7ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, 129.6 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 21ರಷ್ಟು ಹೆಚ್ಚು ಹೆಚ್ಚಾಗಿದೆ.
ಮಲೆನಾಡಿನಲ್ಲಿ 159.3 7 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜಿತ್ತು. ಆದರೆ, 240.6 7ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ. 51ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಭಾಗದಲ್ಲಿ 187.87 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಅಂದಾಜಿತ್ತು. ಆದರೆ, 261.3 ಮಳೆಯಾಗಿದ್ದು, ವಾಡಿಕೆಗಿಂತ ಶೇ. 39ರಷ್ಟು ಹೆಚ್ಚು ಮಳೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಜೂನ್ ಒಂದರಿಂದ ಸೆಪ್ಟೆಂಬರ್ 30ರ ನಡುವಿನ ಅವಧಿಯಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರಾಜ್ಯದದಲ್ಲಿ ಒಟ್ಟು 852 ಮಿ.ಮೀ. ಮಳೆಯಾಗಲಿದೆ ಎಂದು ಅಂದಾಜಿತ್ತು. ಆದರೆ, 978 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 15ರಷ್ಟು ಹೆಚ್ಚು ಮಳೆಯಾಗಿದೆ. ಹೀಗಾಗಿ ಹಲವೆಡೆ ರೈತರು ಕಂಗಾಲಾಗಿದ್ದಾರೆ.