ಚಿತ್ರದುರ್ಗ: ಜಿಲ್ಲೆಯಲ್ಲಿ ತಡರಾತ್ರಿ ಹಲವೆಡೆ ಧಾರಾಕಾರ ಮಳೆಯಿಂದ ಕೆರೆ- ಕಟ್ಟೆ ಭರ್ತಿಯಾಗಿ ಹಲವು ಕಡೆ ಜಮೀನುಗಳಿಗೆ ನೀರು ನುಗ್ಗಿದೆ.
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮಧು ಎನ್ನುವವರ ಮೆಕ್ಕೆಜೋಳ ತೋಟಕ್ಕೆ ನೀರು ನುಗ್ಗಿದ ಪರಿಣಾಮ ಬೆಳೆ ಹಾನಿಯಾಗಿದೆ.
ಅವೈಜ್ಞಾನಿಕ ಕೋಡಿ ನಿರ್ಮಾಣದಿಂದ ಜಮೀನಿಗೆ ನೀರು ನುಗ್ಗಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಮಳೆಯಿಂದಾಗಿ ಮೆಕ್ಕೆಜೋಳ, ತರಕಾರಿ ಬೆಳೆಗೆ ಹಾನಿಯಾಗಿದ್ದು, ರೈತ ಮಧು ಸಂಕಷ್ಟಕ್ಕೆ ಸಿಲುಕಿದ್ದಾರೆ.