ಬೆಳಗಾವಿ: ಬೆಳಗಾವಿಯಲ್ಲಿ ಒಂದು ಗಂಟೆಗಳ ಕಾಲ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಇದರಿಂದ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ಜನ ಓಡಾಡಲು ಪರದಾಡುವಂತಾಗಿತ್ತು.
ಕೈಗಾರಿಕಾ ಪ್ರದೇಶದಲ್ಲಿ ದಿಢೀರ್ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಚರಂಡಿ ನೀರು ರಸ್ತೆ ಮೇಲೆ ಬಂದು ವಾಹನ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿತ್ತು. ಇದರಿಂದ ಬೇಸತ್ತ ಜನ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದರ ನಡುವೆ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ನಗರವಾಸಿಗಳು ಮಳೆಯಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.


















