ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ. 27ರ ನಂತರ ಭಾರೀ ಮಳೆ (Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕೂಡ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ.