ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ಬೆಚ್ಚಿ ಬಿದ್ದಿದ್ದ ರಾಜ್ಯದ ಜನರಿಗೆ ಮಳೆರಾಯ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದಾನೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೇ 13ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟ್ರಫ್ ಇರುವ ಕಾರಣ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 33-35 ಡಿ.ಸೆನಷ್ಟು ಇರುವ ಸಾಧ್ಯತೆ ಇದೆ. ಕರಲಬುರಗಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಗರಿಷ್ಟ ಉಷ್ಣಾಂಶ 38-40ಡಿ.ಸೆ ಇರುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 35-37ಡಿ.ಸೆ ಗರಿಷ್ಟ ಉಷ್ಣಾಂಶ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.