ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಸೆಪ್ಟೆಂಬರ್ 27ರವರೆಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಹ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೆ ಹಕವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಸೆ.26, 27ರಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರವಾಳಿ ಜಿಲ್ಲೆಗಳಲ್ಲೂ ಸೆ.26, 27ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಒಂದು ವಾರದವರೆಗೆ ಹಲವು ಕಡೆ ಹಗುರವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.