ಬೆಂಗಳೂರು:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ.
ಕಳೆದ ಒಂದು ತಿಂಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಆಗಸ್ಟ್ 2ರ ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಆಗಸ್ಟ್ 2ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



















