ಅಸ್ಸಾಂನಲ್ಲಿ ಮಹಾಮಳೆ ಅಬ್ಬರ ಜನಜೀವನವನ್ನೇ ಬುಡಮೇಲು ಮಾಡಿದೆ. ಗುವಾಹಟಿ ಸೇರಿದಂತೆ ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ.
ಕಳೆದ 24 ಗಂಟೆಗಳಲ್ಲಿ ರಾಕ್ಷಸಿ ಮಳೆಗೆ ಗುವಾಹಟಿಯಲ್ಲಿ ಐವರು ಬಲಿಯಾಗಿದ್ದಾರೆ. ನಾಲ್ಕು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿವ ಮಳೆಯ ಪರಿಣಾಮ ಹಲವೆಡೆ ಗುಡ್ಡ ಕುಸಿತ ಪ್ರಕರಣಗಳು ದಾಖಲಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಸಾಂ ಸರ್ಕಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಲ್ಲಿ ರಕ್ಷಣಾ ಕಾರ್ಯವನ್ನು ಆರಂಭಿಸಿದ್ದಾರೆ. ಈ ನಡುವೆ 10ಕ್ಕೂ ಅಧಿಕ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಕೈ ಮೀರಿದ್ದು, ಸ್ಥಳೀಯರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಪ್ರವಾಹ ಸಂತ್ರಸ್ತರ ನೆರವಿಗೆ 14 ಸಾವಿರ ಮೆಟ್ರಿಕ್ ಟನ್ ಅಕ್ಕಿ ರವಾನಿಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


















