ಬೆಂಗಳೂರು: ರಾಜಧಾನಿಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಸುರಿಯುತ್ತಿದೆ. ಮಧ್ಯಾಹ್ನದ ನಂತರ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿ, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಅ.15ರವರೆಗೂ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮೈಸೂರು, ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೆಳಗಿನ ಜಾವ ಸ್ವಲ್ಪ ಬಿಸಿಲು ಕಂಡುಬಂದರೂ, ಮಧ್ಯಾಹ್ನ 2 ಗಂಟೆಯ ನಂತರ ಅಥವಾ ಸಂಜೆಯ ವೇಳೆಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ನಾಳೆ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ