ದೆಹಲಿಯಲ್ಲಿ ಮಹಾ ಮಳೆ ಆರ್ಭಟ ಶುರುವಾಗಿದೆ. ನಿನ್ನೆಯ ವರುಣಾರ್ಭಟಕ್ಕೆ ವಿಮಾನ ನಿಲ್ದಾಣದ ಮೇಲ್ಛಾವಣಿಯೇ ಕುಸಿದು ಹೋಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಇನ್ನು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ 200ಕ್ಕೂ ಹೆಚ್ಚು ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಕಳೆದ ರಾತ್ರಿಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಜಾನೆ ಕಚೇರಿಗೆ ತೆರಳಲು ಹೊರಟವರಿಗೆ ವರುಣ ಶಾಕ್ ನೀಡಿದ್ದ. ರಾಜಧಾನಿಯ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಮನೆಗಳಿಗೆ ನೀರು ನುಗ್ಗಿದೆ.