ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆಯಲಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು(ಮಂಗಳವಾರ) ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ(ಬುಧವಾರ) ರಾಜ್ಯದ ಅರ್ಧದಷ್ಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಿಗೆ, ಉತ್ತರ ಕರ್ನಾಟಕ, ಮಲೆನಾಡ ಜಿಲ್ಲೆಗಳಿಗೆ ಹಾಗೂ ಕರಾವಳಿಯ ಉಡುಪಿ ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಸೆ. 4, 5ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.