ಬೆಂಗಳೂರು: ರಾಜ್ಯದಲ್ಲಿ ಆ.16ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಳಗಾವಿ, ಬೀದರ್, ಕಲ್ಬುರ್ಗಿ, ವಿಜಯಪುರ, ಹಾಸನ, ಚಿಕ್ಕಮಗಳೂರು, ಕೋಲಾರ, ಗದಗ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಸೂಚಿಸಿದೆ.



















