ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ ಮಳೆ ಅಬ್ಬರಿಸಿದೆ. ಗಾಳಿ ಮಳೆಗೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಗಾಳಿಯ ಹೊಡೆತಕ್ಕೆ ಹಾರಿ ಹೋಗಿದ್ದು, ಶಾಲಾ ಕಟ್ಟಡಕ್ಕೂ ಹಾನಿಯಾಗಿದೆ. ಕೆಲ ಗಂಟೆಗಳ ಕಾಲ ಬೀಸಿದ ಬಿರುಸಿನ ಗಾಳಿಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಶಾಲೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಕ್ಕೂ ಹಾನಿಯಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಬೈ ಎಲೆಕ್ಷನ್ ರಿಸಲ್ಟ್ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?



















