ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಿತ್ತೂರು ಪೊಲೀಸರು (Kittur Police) ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಕ್ರಾರವಾಡಿ ಗ್ರಾಮದ ಮಧುಕರ ಸೋಮವಂಶಿ ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕ ಎನ್ನಲಾಗಿದೆ.
ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು.