ಹೆಬ್ಬಾಳ : ಹೆಬ್ಬಾಳದ 21 ನೇ ವಾರ್ಡ್ ನಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ನಿರ್ಮಾಣವಾಗಿರುವ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಮತ್ತು ಹೆಬ್ಬಾಳ ಕ್ಷೇತ್ರದ ಶಾಸಕರೂ ಆಗಿರುವ ಬೈರತಿ ಸುರೇಶ್ ಹಾಗೂ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಬಿ.ಬಿ.ಎಂ.ಪಿ ಸದಸ್ಯರುಗಳು,ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಮಹಿಳಾ ಘಟಕ, ಯುವ ಕಾಂಗ್ರೆಸ್, NSUI, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಈ ಆಸ್ಪತ್ರೆ ಉದ್ಘಾಟನೆಯಿಂದ ವಾರ್ಡ್ ನ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಈ ವೇಳೆ ಮಾತನಾಡಿದ ಮಾನ್ಯ ಸಚಿವರು, ರಾಜ್ಯದಲ್ಲಿ ಹೆಬ್ಬಾಳವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಮಾಡಿರುವುದಾಗಿ ಭರವಸೆ ನೀಡಿದರು. ಸದ್ಯದಲ್ಲೇ, ಪಶು ವಿದ್ಯವಿದ್ಯಾಲಯದ ಆವರಣದಲ್ಲಿ 200 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.



















