ಕೊಪ್ಪಳ: ಕ್ರೀಡಾಕೂಟದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 8 ಮಕ್ಕಳು ಗಂಭಿರವಾಗಿದ್ದು, ತಾವರಗೇರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ. ಈ ಘಟನೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣ ಪಂಚಾಯ್ತಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾ ಕೂಟದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಕ್ರೀಡಾಕೂಟ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ಕ್ರೀಡಾಕೂಟ ನಡೆದಿತ್ತು. ಈ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆಸಿವೆ. ಕ್ರೀಡಾಕೂಟ ನಡೆಯುವ ಮೈದಾನದ ಬೇವಿನ ಮರದಲ್ಲಿ ಹೆಜ್ಜೇನು ಕಟ್ಟಿತ್ತು ಎಂದು ತಿಳಿದು ಬಂದಿದೆ. ಕಿಡಿಗೇಡಿಗಳ ಕೃತ್ಯವಿದೆಯಾ? ಅಥವಾ ತಾನಾಗಿಯೇ ಜೇನುಗಳುಗಳು ದಾಳಿ ನಡೆಸಿವೆಯೇ? ತಿಳಿದು ಬಂದಿಲ್ಲ.