ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಯಾವುದೇ ಸಮಯದಲ್ಲಿ ಡ್ಯಾಂ ತುಂಬಿ ಹೊರಬರುವ ಸಾಧ್ಯತೆಯಿದೆ.
ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.



















