ಬೆಂಗಳೂರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಹೆಸ್ಕಾಂ) ಖಾಲಿ ಇರುವ 338 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಹುಬ್ಬಳ್ಳಿಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬಯಸುವವರು, ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆ ಅವಕಾಶ ಸಿಕ್ಕಂತಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ
ಒಟ್ಟು ಹುದ್ದೆಗಳು: 338
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 18
ಉದ್ಯೋಗ ಸ್ಥಳ: ಹುಬ್ಬಳ್ಳಿ
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಬಿಇ ಪಡೆದ 200 ಅಭ್ಯರ್ಥಿಗಳು ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮಾಡಿದ 138 ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಮಾಡಲು ಅವಕಾಶ ನೀಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಒಂದು ವರ್ಷದವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ 8-9 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://hescom.karnataka.gov.in/en ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಓದಿದ ಬಳಿಕ ಅರ್ಜಿ ನಮೂನೆಯನ್ನು ಓಪನ್ ಮಾಡಬೇಕು
ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು



















