ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಾಯಚೂರು ಜಿಲ್ಲೆಯಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್ ನಲ್ಲಿ (HGML Recruitment 2025) ಖಾಲಿ ಇರುವ ಜನರಲ್ ಮ್ಯಾನೇಜರ್ (ಎಂಜಿನಿಯರಿಂಗ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶವಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್ (HGML)
ಹುದ್ದೆಗಳು: 01
ಹುದ್ದೆ ಹೆಸರು: ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ಉದ್ಯೋಗ ಸ್ಥಳ: ಹಟ್ಟಿ ಚಿನ್ನದ ಗಣಿ, ರಾಯಚೂರು
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.43 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ಮೊದಲು huttigold.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Managing Director, Hutti Gold Mines Co. Ltd., 3rd Floor, KHB, Shopping Complex, National Games Village, Koramangala, Bengaluru – 560047