ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಈ ಮಧ್ಯೆ ಗೆಲುವು ಕಾಣುತ್ತಿದ್ದಂತೆ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ ನಿನ್ನೆಯೆಷ್ಟೇ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ, ಇಂದು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.