ನವದೆಹಲಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ವಾರ್ ಶುರುವಾಗಿದೆ. ಸಿದ್ದರಾಮಯ್ಯ ಅವರು ಕಾನೂನು ಹೋರಾಟ ನಡೆಸಿದ್ದಾರೆ. ಈ ಮದ್ಯೆ ಹೈಕಮಾಂಡ್ ಸಿಎಂಗೆ ಬುಲಾವ್ ನೀಡಿದ್ದು, ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಸಿದ್ದರಾಮಯ್ಯ (Siddaramaiah) ಅವರಿಗೆ ನಿಮ್ಮ ಬೆನ್ನಿಗೆ ನಾವು ಇರುತ್ತೇವೆಂದು ಹೈಕಮಾಂಡ್ ಅಭಯ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರು, ದೆಹಲಿಗೆ ತೆರಳಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಹೈಕಮಾಂಡ್ ನಾಯಕರ ಮುಂದೆ ವಿವರಿಸಿದ್ದಾರೆ. ಮುಡಾ ಹಗರಣದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಸಂಪೂರ್ಣ ವಿವರ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಹೈಕಮಾಂಡ್ಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದೇವೆ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ರಾಜ್ಯಪಾಲರ ನಡೆ ಅಸಾಂವಿಧಾನಿಕವಾಗಿದೆ. ನನಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೈಕಮಾಂಡ್ ಹೇಳಿದೆ ಎಂದು ಹೇಳಿದ್ದಾರೆ.