ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಈ ಬಗ್ಗೆ ಪಕ್ಷದ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ಸದ್ಯಕ್ಕೆ ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ 10 ರಿಂದ 12 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಯಾರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ : ಇಬ್ಬರು ಹುಡುಗೀರಿಗೆ ‘ಒಬ್ನೇ ಲಾಕ್’? ‘ಕಂಗ್ರಾಜುಲೇಷನ್ಸ್ ಬ್ರದರ್’ ವೈರಲ್!



















