ಬೆಂಗಳೂರು: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಹೈಕಮಾಂಡ್ ನಾಯಕರು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಯತ್ನಾಳ್ ವಿಚಾರವನ್ನು ಯಾರೂ ಕೂಡ ಮಾತನ್ನಾಡುವಂತಿಲ್ಲ. ಇದನ್ನು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಯತ್ನಾಳ್ ವಿಚಾರದಲ್ಲಿ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಾಯಕರು ನಿರ್ಧಾರ ಪ್ರಕಟ ಮಾಡಲಿದ್ದಾರೆ ಎಂದಿದ್ದಾರೆ.