ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ನಲ್ಲಿ ಜಾಮೀನು ಸಿಕ್ಕಿದೆ.
ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮುನ್ನ ಸಂಜೆಯ ವೇಳೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ, ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಹೀಗಾಗಿ ಅಲ್ಲು ಅರ್ಜುನ್ ನಿರಾಳರಾಗಿದ್ದಾರೆ.
ಹೀಗಾಗಿ ಸೋಮವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಎಫ್ ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಎಫ್ ಐಆರ್ ಪ್ರಕರಣ ರದ್ದು ಮಾಡಲಿಲ್ಲ. ಬದಲಾಗಿ ಮಧ್ಯಂತರ ಜಾಮೀನು ನೀಡಿತು.
ಅರ್ಜುನ್ ಗೆ, ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಿರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು. ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಉಲ್ಲೇಖಿಸಿದರು.