ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ದಾವಣೆಗೆರೆಗೆ ಉಡುಪಿ ಜಿಲ್ಲೆಯಾದ್ಯಂತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆ ಜುಲೈ 7ರಂದು ರಾಜ್ಯ ಸರ್ಕಾರದ ವಿರುದ್ಧ ಹಿಂದೂ ವಿರೋಧಿ ನೀತಿ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಪ್ರಮುಖ ಭಾಷಣಕಾರರಾಗಿ ಸತೀಶ್ ದಾವಣಗೆರೆಯನ್ನು ಆಹ್ವಾನಿಸಲಾಗಿತ್ತು.ಕೋಮು ಪ್ರಚೋದಕ ಭಾಷಣಗಳು ಸಾರ್ವಜನಿಕ ಶಾಂತಿ ಕದಡುವುದರಿಂದ ಮುಂಜಾಗ್ರತ ಕ್ರಮವಾಗಿ ಜುಲೈ 7ರಿಂದ ಸೆಪ್ಟೆಂಬರ್ 7ರವರೆಗೆ ಎರಡು ತಿಂಗಳುಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



















