ಚಿಕ್ಕಮಗಳೂರು : ಗೋಮಾಂಸ ಅಡ್ಡೆಯ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಕಾಳನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.
ನೂರುಲ್ಲಾ ಎಂಬುವವರ ಮನೆಯ ಹಿಂಭಾಗ ಗೋ ಹತ್ಯೆ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದು, ಮನೆಯ ಮುಂಭಾಗ ನಿಲ್ಲಿಸಿದ್ದ ಕಾರು, ಗೂಡ್ಸ್ ಆಟೋಗಳ ಮೇಲೆ ಕಲ್ಲು ತೂರಾಟ ಮಾಡಿ ವಾಹನಗಳ ಗ್ಲಾಸ್ ಪುಡಿಪುಡಿ ಮಾಡಿದ್ದಾರೆ.
ಗೋಹತ್ಯೆ, ಮಾರಾಟದ ಬಗ್ಗೆ ಹರಿಹರಪುರ ಪೊಲೀಸರಿಗೆ ಮಾಹಿತಿ ನೀಡಿ, ನಿರಂತರವಾಗಿ ಗೋವುಗಳ ಕಳ್ಳತನ ಮಾಡಿ ಮಾಂಸಕ್ಕಾಗಿ ಹತ್ಯೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನೆಯ ಮಾಲೀಕ ನೂರುಲ್ಲಾನನ್ನು ಬಂಧಿಸಲಾಗಿದ್ದು, ಬಂಧನದ ವೇಳೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.