ವಿಜಯಪುರ: ದಸರಾದಲ್ಲಿ ಹಿಂದೂಗಳು ಮುಸ್ಲಿಂ ವ್ಯಾಪಾರಿಗಳ ಹತ್ತಿರ ವ್ಯಾಪಾರ ವಹಿವಾಟು ಮಾಡಬಾರದು ಎಂದು ಪ್ರಕಟಣೆ ಹೊರಡಿಸಿದ್ದಾರೆ.
ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸಬೇಕು. ಹೀಗೆ ಖರೀದಿಸುವುದರಿಂದ ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ. ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು ತಿಂದು ಅಥವಾ ಮನೆಯಲ್ಲಿ ಮಾಂಸಾಹಾರ ತಿಂದು ಬಂದು, ಅಶುದ್ಧತೆಯಿಂದ ವ್ಯಾಪಾರ ಮಾಡುವತ್ತಾರೆ. ಹೀಗಾಗಿ ಅಂತವರ ಹತ್ತಿರ ಪೂಜಾ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಇದಕ್ಕೆ ಮುಸ್ಲಿಂ ವ್ಯಾಪಾರಿಗಳು ವಿರೋಧಿಸಿದ್ದಾರೆ. ಕಳೆದ ಗಣೇಶ ಚತುರ್ಥಿಯ ವೇಳೆಯೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ವ್ಯಾಪಾರಸ್ಥರ ಬಳಿ ವ್ಯಾಪಾರ ವಹಿವಾಟು ಮಾಡಬಾರದು ಎಂದು ಹೇಳಿದ್ದರು. ಈಗ ಮತ್ತೆ ಈ ರೀತಿ ಹೇಳಿದ್ದಾರೆ.