ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಸಂಸ್ಥೆಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ (Hindustan Copper Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಕಾಪರ್
ಹುದ್ದೆ ಹೆಸರು: ಸೀನಿಯರ್ ಸಬ್ಜೆಕ್ಟ್ ಎಕ್ಸ್ ಪರ್ಟ್ ಇತ್ಯಾದಿ
ಒಟ್ಟು ಹುದ್ದೆ: 7
ಉದ್ಯೋಗ ಸ್ಥಳ: ದೇಶದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 13
ಮೂರು ಸೀನಿಯರ್ ಸಬ್ಜೆಕ್ಟ್ ಎಕ್ಸ್ ಪರ್ಟ್, ಒಂದು ಅಸೋಸಿಯೇಟ್ ಸಬ್ಜೆಕ್ಟ್ ಎಕ್ಸ್ ಪರ್ಟ್, ಒಂದು ಅಸಿಸ್ಟಂಟ್ ಸಬ್ಜೆಕ್ಟ್ ಎಕ್ಸ್ ಪರ್ಟ್ ಹಾಗೂ ಎರಡು ಮೆಡಿಕಲ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಧ್ಯಪ್ರದೇಶದ ಬಾಲಾಘಾಟ್, ರಾಜಸ್ಥಾನದ ಜುಂಝುನು ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕೆಲಸ ಮಾಡುವವರು ಅರ್ಜಿ ಸಲ್ಲಿಸಬಹುದಾಗಿದೆ.
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಎಂಡಿ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 70 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ http://hindustancopper.com/ ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ: ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 173 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಹುದ್ದೆಗಳು


















