ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಹಿಂದುಸ್ತಾನ್ ಕಾಪರ್ ಸಂಸ್ಥೆಯಲ್ಲಿ ಖಾಲಿ ಇರುವ 43 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದುಸ್ತಾನ್ ಕಾಪರ್
ಒಟ್ಟು ಹುದ್ದೆಗಳು: 43
ಹುದ್ದೆಗಳ ಹೆಸರು: ಫಿಕ್ಸೆಡ್ ಟರ್ಮ್ ಎಕ್ಸಿಕ್ಯೂಟಿವ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ದೇಶಧ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್, ಸಿಎ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 52 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.69 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸರ್ ನಾನು ನಾಳೆ ವೀಕ್ ಆಫ್ ತಗೋತೀನಿ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hindustancopper.com ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ



















