ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್ ಶಿಪ್ ಯಾರ್ಡ್ ಲಿಮಿಟೆಡ್ ಸಂಸ್ಥೆಯಲ್ಲಿ (Hindustan Shipyard Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದುಸ್ತಾನ್ ಶಿಪ್ ಯಾರ್ಡ್ ಲಿಮಿಟೆಡ್
ಹುದ್ದೆ ಹೆಸರು: ಜನರಲ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆ: 11
ಉದ್ಯೋಗ ಸ್ಥಳ: ವಿಶಾಖಪಟ್ಟಣಂ, ಆಂಧ್ರಪ್ರದೇಶ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 13
ಜನರಲ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಕನ್ಸಲ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರು 300 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 2.6 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ. ವಿದ್ಯಾರ್ಹತೆ, ಅನುಭವ, ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hslvizag.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ವಾಯುಪಡೆ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೈತುಂಬ ಸಂಬಳದ ಉದ್ಯೋಗ



















