ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಬಳಿ ನಡೆದಿದೆ.
ನವಮಿ (26) ಮೃತ ದುರ್ದೈವಿ. ಇವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ,
ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆ, ಆಲ್ದೂರು ಹೋಬಳಿಯಲ್ಲಿನ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮುಂದೂಡಿಕೆಯಾಗಿದೆ.
ಇದನ್ನೂ ಓದಿ: ತುಮಕೂರು ಬಳಿ ಭೀಕರ ಅಪಘಾತ | ಮೂವರು ಟೆಕ್ಕಿಗಳು ಸ್ಥಳದಲ್ಲೇ ಸಾವು!



















