ಬೆಂಗಳೂರು: ಎಚ್ ಎಲ್ ಎಲ್ ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಲವು ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಉದ್ಯೋಗ ಸ್ಥಳ: ಬೆಳಗಾವಿ, ಕರ್ನಾಟಕ
ಹುದ್ದೆಗಳ ಹೆಸರು: ಟ್ರೈನಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 23
ಒಂದು ಎಂಬಿಎ ಟ್ರೈನಿ, 5 ಗ್ರ್ಯಾಜುಯೇಟ್ ಟ್ರೈನಿ ಹಾಗೂ 5 ಐಟಿಐ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಲ್ಲಿ ಐಟಿಐ, ಬಿಎಸ್ಸಿ ಹಾಗೂ ಎಂಬಿಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿಯೇ ಮಾಸಿಕ 9,500 ರೂಪಾಯಿಯಿಂದ 15 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.comವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
General Manager Operations & Unit Chief, Hll Lifecare Limited, Kanagala – 591 225
ಇದನ್ನೂ ಓದಿ : ನೀವು ಮೊದಲ ಬಾರಿ ಕೆಲಸಕ್ಕೆ ಸೇರಿದ್ದೀರಾ? ನಿಮಗೆ ಸಿಗಲಿದೆ ಹೆಚ್ಚುವರಿ 15 ಸಾವಿರ ರೂಪಾಯಿ



















