ಬೆಂಗಳೂರು : ನೀವು ಬೆಳಗಾವಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ (HLL Lifecare Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ಮ್ಯಾನೇಜರ್ ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಳಗಾವಿ, ಕೇರಳದ ತಿರುವನಂತಪುರಂ
ಹುದ್ದೆಗಳ ಹೆಸರು: ಸೀನಿಯರ್ ಮ್ಯಾನೇಜರ್ ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 2
ಬೆಳಗಾವಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಪಿಜಿಡಿಎಂ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.


















