ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. HLL ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2026) ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 40
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆಗಳ ಹೆಸರು: ಮ್ಯಾನೇಜರ್ ಮೆಂಟ್ ಟ್ರೈನಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 10
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿ.ಇ, ಬಿ.ಟೆಕ್, ಬಿ.ಫಾರ್ಮ್, ಎಂಬಿಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕವಿರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : 67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!



















