ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ (HLL Lifecare Recruitment 2026) ಖಾಲಿ ಇರುವ 55 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 55 ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 55
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆಗಳ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 21
ಸೀನಿಯರ್ ಮ್ಯಾನೇಜರ್ ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂಬಿಎ, ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವವರಿಗೆ 47 ವರ್ಷಗಳ ಗರಿಷ್ಠ ವಯೋಮಿತಿ ಇದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ:ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!



















