ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ (HLL Lifecare Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಸೀನಿಯರ್ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಸೀನಿಯರ್ ಲ್ಯಾಬ್ ಟೆಕ್ನಿಶಿಯನ್
ಸಂದರ್ಶನ ನಡೆಯುವ ದಿನಾಂಕ: ಸೆಪ್ಟೆಂಬರ್ 12
ಲ್ಯಾಬ್ ಟೆಕ್ನಿಶಿಯನ್, ಸೀನಿಯರ್ ಲ್ಯಾಬ್ ಟೆಕ್ನಿಶಿಯನ್, ಅಕೌಂಟ್ಸ್ ಆಫೀಸರ್, ರೇಡಿಯೋಗ್ರಾಫರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ, ಎಂಎಸ್ಸಿ, ಎಂ.ಕಾಂ, ಸಿಎ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 32,500 ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Rosewood International Hotel No. 19/1, Mysore Road, Beside Satellite Bus Stop, New Timberyard Layout, Telecom Colony, Banashankari, Bengaluru, Karnataka – 560026.
ಇದನ್ನೂ ಓದಿ : ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!



















