ಬೆಂಗಳೂರು: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ಎಚ್ಎಂಪಿವಿ (HMPV) ಸಿಲಿಕಾನ್ ಸಿಟಿಗೂ ಕಾಲಿಟ್ಟಿದೆ.
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ವೈರಲ್ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಗುವಿನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ದೃಢಪಟ್ಟಿದೆ. ಆದರೆ, ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಹೇಳಿದ್ದಾರೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸಾ? ಅಥವಾ ಚೀನಾದ ತಳಿಯಾ ಎಂಬ ಗೊಂದಲ ಕೂಡ ಇದೆ. ಎಚ್ಎಂಪಿವಿ ವೈರಸ್ ಮತ್ತು ಕೊರೊನಾ ವೈರಸ್ ಕೆಲವು ರೀತಿಯಲ್ಲಿ ಹೋಲಿಕೆ ಹೊಂದಿವೆ. ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗ ನಿರೋಧಕ ಶಕ್ತಿ ಹೊಂದಿರುವ ಜನರು ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.