ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ಥಾನ್ ಮಷೀನ್ ಟೂಲ್ಸ್ (HMT Limited Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ಥಾನ್ ಮಷೀನ್ ಟೂಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಹೈದರಾಬಾದ್, ತೆಲಂಗಾಣ
ಹುದ್ದೆಗಳ ಹೆಸರು: ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಎಲ್ ಎಲ್ ಬಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಫೈನಾನ್ಸ್ ಹಾಗೂ ಲೀಗಲ್ ವಿಭಾಗದಲ್ಲಿ ಖಾಲಿ ಇರುವ ತಲಾ ಒಂದು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 14,600 ರೂ. ಸಂಬಳ ನೀಡಲಾಗುತ್ತದೆ. ಫ್ರೆಶರ್ ಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ ಆಗಿರುವ hmtindia.com ಗೆ ಭೇಟಿ ನೀಡಬೇಕು.
HMT Limited ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆಯನ್ನು ಓದಿಕೊಂಡು, ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು.
ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
ಶುಲ್ಕ ಪಾವತಿ ಮಾಡಬೇಕು.
ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಬೇಕು.
ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy Manager (HR)/APIO, HMT Machine Tools Limited, HMT Township PO, Narsapur Road, Hyderabad-500 054, Telangana
ಇದನ್ನೂ ಓದಿ : ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!



















