ಮಲೆನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ಆದೇಶ ಹೊರಡಿಸಿದ್ದಾರೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವುದರಿಂದಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೂಡ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮುಂದಿನ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚೆರಿಕಾ ಕ್ರಮವಾಗಿ ನಾಳೆ ಜಿಲ್ಲೆಯಲ್ಲಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


















