ಬೆಂಗಳೂರು: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಜನ- ಜೀವನ ಅಸ್ತವ್ಯಸ್ಥವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿವೆ. ಶಿವಮೊಗ್ಗದಲ್ಲಿ ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ 40 ಸಾವಿರ ಕ್ಯುಸೆಕ್ಸೂ ನೀರು ಹರಿದು ಬಂದಿದೆ.