ಬೆಂಗಳೂರು : ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ ನಡೆಯುತ್ತಿರುವ ಈ ಅದ್ಭುತ ಮ್ಯೂಸಿಕಲ್ ಥಿಯೇಟರ್‌ಗೆ ಜನ ಸಾಗರವೇ ಹರಿದುಬರುತ್ತಿದ್ದು, ಹೊಂಬಾಳೆ ಫಿಲಂಸ್ನ ‘ರಾಜಾಧಿರಾಜ’ ಶೋಗಳು ಸತತವಾಗಿ ಎಲ್ಲಾ ಪ್ರದರ್ಶನಗಳು ಹೌಸ್‌ಫುಲ್ ಆಗುತ್ತಿವೆ. ಇಂದು ಬೆಂಗಳೂರಿನಲ್ಲಿ ಈ ಭವ್ಯ ಪ್ರದರ್ಶನದ ಕೊನೆಯ ದಿನವಾಗಿದ್ದು, ಅಂತಿಮ ಎರಡು ಶೋಗಳ ಟಿಕೆಟ್‌ಗಳು ಈಗಾಗಲೇ ಸಂಪೂರ್ಣವಾಗಿ ಮಾರಾಟವಾಗಿವೆ. ಕೃಷ್ಣನ ಲೀಲೆಗಳನ್ನು ಕಣ್ಣಮುಂದೆ ತರುತ್ತಿರುವ ಈ ಕಲೆಗೆ ಸಿಲಿಕಾನ್ ಸಿಟಿ ಮಾರುಹೋಗಿದೆ.

ಕೃಷ್ಣನ ಜೀವನ ಯಾನ: ವ್ರಜದ ಬಾಲಕೃಷ್ಣನಿಂದ ಹಿಡಿದು ದ್ವಾರಕಾಧೀಶನವರೆಗಿನ ಶ್ರೀಕೃಷ್ಣನ ದೈವಿಕ ಪಯಣವನ್ನು ಈ ನಾಟಕದಲ್ಲಿ ಅತ್ಯಂತ ಮನೋಜ್ಞವಾಗಿ ಚಿತ್ರಿಸಲಾಗಿದೆ.

ಪ್ರತಿಷ್ಠಿತ ತಂಡ: ಪದ್ಮಶ್ರೀ ಪುರಸ್ಕೃತ ಪ್ರಸೂನ್ ಜೋಶಿ ಅವರ ಲೇಖನಿ, ಶ್ರುತಿ ಶರ್ಮಾ ಅವರ ನಿರ್ದೇಶನ ಹಾಗೂ ಸಚಿನ್-ಜಿಗರ್ ಅವರ ಸಂಗೀತ ಈ ಪ್ರದರ್ಶನದ ಜೀವಾಳ. ದೃಷ್ಟಿವೈಭವ: ಪ್ರಸಿದ್ಧ ವಿನ್ಯಾಸಕಿ ನೀತಾ ಲುಲ್ಲಾ ಅವರ ವಸ್ತ್ರಾಲಂಕಾರ ಮತ್ತು ಭವ್ಯವಾದ ಸೆಟ್ ಸೆಟ್ಟಿಂಗ್‌ಗಳು ಪ್ರೇಕ್ಷಕರನ್ನು ದ್ವಾಪರ ಯುಗಕ್ಕೆ ಕರೆದೊಯ್ಯುತ್ತವೆ.
ಸಂಗೀತ ಮತ್ತು ನೃತ್ಯ: 20ಕ್ಕೂ ಹೆಚ್ಚು ಮೂಲ ಹಾಡುಗಳು ಹಾಗೂ ಮೈನವಿರೇಳಿಸುವ ನೃತ್ಯ ಸಂಯೋಜನೆ ಈ ಶೋನ ಹೈಲೈಟ್.
ಲಾಫಿಂಗ್ ವಾಟರ್ ಪ್ರೊಡಕ್ಷನ್ಸ್, ಹೊಂಬಾಳೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಕಲಾನೇಷನ್ ಜಂಟಿಯಾಗಿ ಈ ಮಹೋನ್ನತ ಕಾರ್ಯಕ್ರಮವನ್ನು ಆಯೋಜಿಸಿವೆ. ಬೆಂಗಳೂರಿನಲ್ಲಿ ಐತಿಹಾಸಿಕ ಯಶಸ್ಸು ಕಂಡಿರುವ ‘ರಾಜಾಧಿರಾಜ ಯಾತ್ರೆ’, ಈಗ ತನ್ನ ಮುಂದಿನ ಪಯಣವನ್ನು ಚೆನ್ನೈನತ್ತ ಬೆಳೆಸುತ್ತಿದೆ. ಮಾರ್ಚ್ 27 ರಿಂದ 29 ರವರೆಗೆ ಚೆನ್ನೈ ಪ್ರೇಕ್ಷಕರನ್ನು ರಂಜಿಸಲು ಈ ತಂಡ ಸಜ್ಜಾಗಿದೆ.
ಕೇವಲ ಒಂದು ನಾಟಕವಾಗಿ ಉಳಿಯದೆ, ಭಕ್ತಿ ಮತ್ತು ಕಲೆಯ ಸಂಗಮವಾಗಿರುವ ಈ ‘ರಾಜಾಧಿರಾಜ ಯಾತ್ರೆ’ ಭಾರತೀಯ ರಂಗಭೂಮಿ ಇತಿಹಾಸದಲ್ಲಿ ಹೊಸ ದಾಖಲೆ ಬರೆಯುತ್ತಿದೆ.



















