ಬೆಂಗಳೂರು: ಮಲಯಾಳಂನ ಬಹುನಿರೀಕ್ಷಿತ “L2E: ಎಂಪುರಾನ್” ಚಿತ್ರವನ್ನು ಕರ್ನಾಟಕದಾದ್ಯಂತ ವಿತರಿಸುವುದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ.
ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್ ಮತ್ತು ಟೋವಿನೋ ಥಾಮಸ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಸಹಯೋಗವು ಹೊಂಬಾಳೆ ಫಿಲ್ಮ್ಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ನಡುವಿನ ಗಟ್ಟಿ ಮತ್ತು ವಿಕಸನಗೊಳ್ಳುತ್ತಿರುವ ಸಂಬಂಧಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಹೊಂಬಾಳೆ ಫಿಲಂಸ್ ನ ಮೆಗಾ ಹಿಟ್ ಗಳಾದ ಕೆಜಿಎಫ್ ಚಾಪ್ಟರ್ 1, ಕೆಜಿಎಫ್ ಚಾಪ್ಟರ್ 2 ಮತ್ತು ಕಾಂತಾರ ಪೃಥ್ವಿರಾಜ್ ಸುಕುಮಾರನ್ ಕೇರಳದಲ್ಲಿ ವಿತರಿಸಿದ್ದಾರೆ.
ಪೃಥ್ವಿರಾಜ್ ಅವರ ಆಡುಜೀವಿತಂ (ದಿ ಗೋಟ್ ಲೈಫ್) ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ವಿತರಣೆ ಮಾಡಿತು. ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಲ್ಲಿ ಪೃಥ್ವಿರಾಜನ್ ನಟಿಸುವ ಮೂಲಕ ಆ ಬಂಧ ಮತ್ತಷ್ಟು ಗಟ್ಟಿಯಾಗಿದೆ.
ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ಹೊಸ ಚಿತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸುತ್ತಿದ್ದಾರೆ. ಇದೆಲ್ಲದರ ನಡುವೆ L2E: ಎಂಪುರನ್ ಸಿನಿಮಾವನ್ನು ಕರ್ನಾಟಕದಾದ್ಯಂತ ಐದು ಭಾಷೆಗಳಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.



















