ಬೆಂಗಳೂರು: ನೀವು ಬೆಂಗಳೂರು ಉತ್ತರ ಜಿಲ್ಲೆಯವರಾ? ಎಸ್ಸೆಸ್ಸೆಲ್ಸಿ ಪಾಸಾಗಿದ್ದು, ನಿಮ್ಮ ಜಿಲ್ಲೆಯಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಬೆಂಗಳೂರು ಉತ್ತರ ಜಿಲ್ಲೆಯ ಗೃಹರಕ್ಷಕ ದಳದಲ್ಲಿ (Home Guard Recruitment 2026) ಖಾಲಿ ಇರುವ ವಿವಿಧ ಹೋಮ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಉತ್ತರ ಜಿಲ್ಲಾ ಗೃಹ ರಕ್ಷಕ ದಳ
ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 7
ಉದ್ಯೋಗ ಸ್ಥಳ: ಬೆಂಗಳೂರು ಉತ್ತರ ಜಿಲ್ಲೆ
ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ನಿಷ್ಕಾಮ ಸೇವೆ ಧ್ಯೇಯದ ಅಡಿಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಿ ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ಇರುವುದಿಲ್ಲ. ಬದಲಾಗಿ ಅವರಿಗೆ ಗೌರವ ಧನ ನೀಡಲಾಗುತ್ತದೆ. ಪೊಲೀಸ್ ಇಲಾಖೆಗೆ ಬೆಂಬಲವಾಗಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಕಮಾಂಡಂಟ್ ಆಫೀಸ್, ಹೋಮ್ ಗಾರ್ಡ್ಸ್ ಡಿಪಾರ್ಟ್ ಮೆಂಟ್, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರೋಡ್, ಫೈರ್ ಸ್ಟೇಷನ್ ಸಮೀಪ, ರಾಜಾಜಿನಗರ, ಬೆಂಗಳೂರು-560010.
ಇದನ್ನೂ ಓದಿ:ಇಸ್ರೋದ NSIL ಸಂಸ್ಥೆಯಲ್ಲಿ ಚೀಫ್ ಮ್ಯಾನೇಜರ್ ಹುದ್ದೆಯ ನೇಮಕಾತಿ: 2.2 ಲಕ್ಷ ರೂ. ಸಂಬಳ



















