ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಾತ್ರವಲ್ಲದೇ “ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ಸಿದ್ದರಾಮಯ್ಯ ಅವರು 28 ಕೊಲೆಗಳನ್ನು ಮಾಡಿದ್ದಾರೆ” ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿದ್ದಲ್ಲದೇ, ಈ ಆರೋಪಕ್ಕೆ ಎಸ್.ಐ.ಟಿ ರಚನೆ ಮತ್ತು ತಿಮರೋಡಿಯನ್ನು ಶೀಘ್ರದಲ್ಲೇ ಬಂಧಿಸುವಂತೆ ಆರ್. ಅಶೋಕ್, ಸುನೀಲ್ ಕುಮಾರ್ ಸೇರಿ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ವಿಪಕ್ಷಗಳ ಆಗ್ರಹ ಮತ್ತು ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ದೂರುದಾರನ ವಿರುದ್ಧ ಈಗಾಗಲೇ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಸರ್ಕಾರ ದುರ್ಬಲವಾಗಿಲ್ಲ. ಸಿಎಂ ಬಗ್ಗೆ ಆರೋಪ ಹೊರಿಸಿರುವವನಿಗೆ ಖಂಡಿತ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು, ಗೃಹಸಚಿವರು ತಿಮರೋಡಿ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಯಾವುದೇ ಕ್ಷಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಬಹುದು ಎಂದು ಸುದ್ದಿ ಮೂಲಗಳು ಕರ್ನಾಟಕ ನ್ಯೂಸ್ ಬೀಟ್ ಗೆ ತಿಳಿಸಿವೆ.



















