ಕಾರ್ಕಳ : ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಕುಟುಂಬದೊಂದಿಗೆ ಕಾರ್ಕಳ ತಾಲೂಕಿನ ಐತಿಹಾಸಿಕ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಉಪಸ್ಥಿತರಿದ್ದ ಸಚಿವರು, ಕುಟುಂಬ ಸಮೇತವಾಗಿ ದೇಗುಲದಲ್ಲಿ ನಡೆಯುತ್ತಿದ್ದ ವಿಶೇಷ ಚಂಡಿಕಾ ಯಾಗದಲ್ಲಿ ಭಾಗಿಯಾದರು. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಚಿವರನ್ನು ಬರಮಾಡಿಕೊಂಡರು.