ಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Parameshwar) ಅವರು ಸಚಿವ ರಾಜಣ್ಣ (Rajanna) ಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ನಮ್ಮ ಪಕ್ಷದ ಹಿರಿಯ ಸಚಿವರು, ಪಕ್ಷದ ಅಧ್ಯಕ್ಷರು ಸಹ ಆಗಿದ್ದಾರೆ. ಅವರು ಸದನದಲ್ಲಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯನವರು (CM Siddaramaiah) ಸಹ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜಣ್ಣಗೆ ನ್ಯಾಯ ಸಿಗಲಿದೆ. ಅನ್ಯಾಯ ಆದವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಪರಮೇಶ್ವರ್ ಮಾಡುತ್ತಾರೆ ಎಂದಿದ್ದಾರೆ.