ಮೈಸೂರು:ಹನಿಟ್ರ್ಯಾಪ್ ಮಾಡುತ್ತಿದ್ದ ಕಿಲಾಡಿ ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಎಂಬಾತನಿಗೆ ಹನಿಟ್ರ್ಯಾಪ್ (honeytrap) ಮಾಡಿ ಪರಾರಿಯಾಗಿದ್ದ ಕಿಲಾಡಿ ಜೋಡಿ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದೆ. ಕವನ ಹಾಗೂ ಸೈಫ್ ಎಂಬ ಖತರ್ನಾಕ್ ಜೋಡಿಯನ್ನು ಕೇರಳದ ಕಣ್ಣೂರಿನ ಲಾಡ್ಜ್ ವೊಂದರಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಹನಿಟ್ರ್ಯಾಪ್ ಪ್ರಕರಣ ಗ್ರಾಮದ ಬೈಲಕುಪ್ಪೆ ಠಾಣೆಯಲ್ಲಿ ದಾಖಲಾಗಿತ್ತು.
ಕಳೆದ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ನನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಕವನ ಹಾಗೂ ಸೈಫ್ ಜೋಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಈ ಸಂಬಂಧದಿನೇಶ್ ಕುಮಾರ್ ಬೈಲಕುಪ್ಪೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಬೆನ್ನಟ್ಟಿದ್ದ ಪೊಲೀಸರ ತಂಡ, ತನಿಗೆ ಚುರುಕುಗೊಳಿಸಿಕೊಂಡು ಪೇದೆ ಶಿವಣ್ಣ, ಆನಂದ್ ಹಾಗೂ ಮೂರ್ತಿಯನ್ನು ಬಂಧಿಸಿದ್ದರು. ಆದರೆ, ತಲೆ ಮರೆಸಿಕೊಂಡಿದ್ದ ಜೋಡಿಯನ್ನು ಇಂದು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.