ತುಮಕೂರು : ಪೆಟ್ರೋಲ್ ಬಂಕ್ ಬಳಿ ಸಿಗರೇಟು ಸೇದಿದ ಯುವಕರ ಬೈಕ್ ಗೆ ಪೆಟ್ರೋಲ್ ಹಾಕಲು ನಿರಾಕರಿಸಿದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ದೊಣ್ಣೆ ಹಾಗೂ ಕಬ್ಬಿಣದ ಬಕೆಟ್ ನಿಂದ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲೂಕಿನ ಹೇರೂರು ಗ್ರಾಮದ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಯುವಕರ ಪುಂಡಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವರಾಜ್, ದರ್ಶನ್, ಮಂಜುನಾಥ್ ಹಾಗೂ ಹಿತೇಶ್ ಬಂಧಿತ ಪುಂಡರು. ಯುವಕರನ್ನು ಗುಬ್ಬಿ ತಾಲೂಕಿನವರು ಎನ್ನಲಾಗಿದೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.