ಕೊಪ್ಪಳ: ಬೈಕ್ ಹಾಗೂ ಬುಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಮೃತ ದುರ್ದೈವಿಗಳು.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಈ ಘಟನಾ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!



















